Thursday, August 11, 2022
Google search engine
HomeUncategorizedಅಮೃತ ಮಹೋತ್ಸವ ಹೊತ್ತಲ್ಲೇ ವಿವಿಧ ಮಠಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ಅಮೃತ ಮಹೋತ್ಸವ ಹೊತ್ತಲ್ಲೇ ವಿವಿಧ ಮಠಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ಅಮೃತ ಮಹೋತ್ಸವ ಹೊತ್ತಲ್ಲೇ ವಿವಿಧ ಮಠಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ

ದಾವಣಗೆರೆಯಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಜನ್ಮದಿನದ ಅಮೃತ ಮಹೋತ್ಸವ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಮಠ ಮಂದಿರಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡಿದ್ದಾರೆ.

ದಾವಣಗೆರೆಯ ದುಗ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ ಅವರು ದೇವಿಯ ದರ್ಶನ ಪಡೆದುಕೊಂಡರು. ನಂತರ ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರು ಪೀಠದ ಬೆಳ್ಳೂಡಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

ಹರಿಹರದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ ಶ್ರೀ ವಚನಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಅವರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶರಣರ ಆಶೀರ್ವಾದ ಪಡೆದಿದ್ದಾರೆ.

ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಸಿರಿಗೆರೆಯ ಶ್ರೀ ತರಳಬಾಳು ಬೃಹನ್ಮಠಕ್ಕೆ ಭೇಟಿ ನೀಡಿ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments