Saturday, November 26, 2022
Google search engine
HomeUncategorizedಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾಸಮಾವೇಶ; ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾಸಮಾವೇಶ; ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾಸಮಾವೇಶ; ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಜಾಗತಿಕ ಹೂಡಿಕೆದಾರರನ್ನು ಸೆಳೆಯುವ ಸಲುವಾಗಿ ಕರ್ನಾಟಕದಲ್ಲಿ ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾ ಸಮಾವೇಶ ನಡೆಯಲಿದ್ದು, ಇದರಲ್ಲಿ ವಿಶ್ವದ ದಿಗ್ಗಜ ಕಂಪನಿಗಳು ಭಾಗಿಯಾಗಲಿವೆ. ನವೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಲ್ಲಿ ಈ ಸಮಾವೇಶ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಸ್ಮೃತಿ ಇರಾನಿ, ನಿತಿನ್ ಗಡ್ಕರಿ, ಭಗವಂತ ಖೂಬಾ ಭಾಗವಹಿಸಲಿದ್ದಾರೆ. ಸಮಾವೇಶದ ಯಶಸ್ಸಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ.

ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಸಲುವಾಗಿ ಈ ಒಂದು ಮಹತ್ವದ ಸಮಾವೇಶ ನಡೆಯುತ್ತಿದ್ದು, ಕೈಗಾರಿಕೋದ್ಯಮಗಳು ಕೈಗಾರಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಅನುಕೂಲವಾಗುವಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments