Thursday, August 11, 2022
Google search engine
HomeUncategorizedಈ ಒಂದು ದಾಖಲೆಗೆ ಪಾತ್ರವಾಗಲಿದೆಯಾ ‘ಸಿದ್ದರಾಮೋತ್ಸವ’ ?

ಈ ಒಂದು ದಾಖಲೆಗೆ ಪಾತ್ರವಾಗಲಿದೆಯಾ ‘ಸಿದ್ದರಾಮೋತ್ಸವ’ ?

ಈ ಒಂದು ದಾಖಲೆಗೆ ಪಾತ್ರವಾಗಲಿದೆಯಾ ‘ಸಿದ್ದರಾಮೋತ್ಸವ’ ?

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಭರ್ಜರಿ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ.

ಇದಕ್ಕಾಗಿ ಈಗಾಗಲೇ ಅದ್ದೂರಿ ಸಿದ್ಧತೆ ನಡೆಸಲಾಗಿದ್ದು, 6.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಹಿಂದೆ 2022 ರ ಮೇ ತಿಂಗಳಲ್ಲಿ ಬೆಂಗಳೂರು ಸಮೀಪದ ನೆಲಮಂಗದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ‘ಜನತಾ ಜಲಧಾರೆ’ ರಥಯಾತ್ರೆ ಸಮಾರೋಪ ಸಮಾರಂಭದಲ್ಲಿ ಸುಮಾರು ನಾಲ್ಕು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಇದು ರಾಜಕೀಯ ಸಮಾವೇಶ ಒಂದರಲ್ಲಿ ಅತಿ ಹೆಚ್ಚು ಜನರಿಗೆ ಊಟ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ ದಾವಣಗೆರೆಯಲ್ಲಿ ನಾಳೆ ನಡೆಯಲಿರುವ ‘ಸಿದ್ದರಾಮೋತ್ಸವ’ ಕಾರ್ಯಕ್ರಮದಲ್ಲಿ 6.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಹೊಸ ದಾಖಲೆಗೆ ಪಾತ್ರವಾಗಲಿದೆ ಎಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments