Friday, October 7, 2022
Google search engine
HomeUncategorizedಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಸಾಮೂಹಿಕ ಅತ್ಯಾಚಾರವೆಸಗಿ ಬಾಲಕಿಗೆ ಬೆಂಕಿ

ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಸಾಮೂಹಿಕ ಅತ್ಯಾಚಾರವೆಸಗಿ ಬಾಲಕಿಗೆ ಬೆಂಕಿ

ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಸಾಮೂಹಿಕ ಅತ್ಯಾಚಾರವೆಸಗಿ ಬಾಲಕಿಗೆ ಬೆಂಕಿ

ಪಿಲಿಭಿತ್: ಉತ್ತರಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ದಲಿತ ಬಾಲಕಿಯೊಬ್ಬಳನ್ನು ಸುಟ್ಟು ಹಾಕಿದ ಘಟನೆ ನಡೆದಿದೆ.

ಸೆ7 ರಂದು ಘಟನೆ ನಡೆದಿದ್ದು, ಸಂತ್ರಸ್ತೆ ಕಳೆದ 12 ದಿನಗಳಿಂದ ಲಕ್ನೋದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಳು. ಸೋಮವಾರ ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ರಾಜವೀರ್(19) ಮತ್ತು ತಾರಾಚಂದ್ ಅಲಿಯಾಸ್ ತರುಣ್ ಕುಮಾರ್(25) ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪ್ರಭು ಹೇಳಿದ್ದಾರೆ.

16 ರ ಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿತ್ತು. ಸೆ.7 ರಂದು ಮಾಧವ್ ತಾಂಡಾ ಪ್ರದೇಶದಲ್ಲಿ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments