Wednesday, August 17, 2022
Google search engine
HomeUncategorizedಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ 5000 ಪೇದೆ, 450 ಎಸ್ಐ ಹುದ್ದೆಗಳಿಗೆ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ 5000 ಪೇದೆ, 450 ಎಸ್ಐ ಹುದ್ದೆಗಳಿಗೆ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ 5000 ಪೇದೆ, 450 ಎಸ್ಐ ಹುದ್ದೆಗಳಿಗೆ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಶೀಘ್ರದಲ್ಲೇ 5000 ಪೇದೆ ಹಾಗೂ 450 ಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಅಲ್ಲದೇ ಪರೀಕ್ಷೆಗಳನ್ನು ಯಾವ ರೀತಿ ಅತ್ಯಂತ ಪಾರದರ್ಶಕ ರೀತಿಯಲ್ಲಿ ನಡೆಸಬಹುದು ಎಂಬುದನ್ನು ತೋರಿಸಿಕೊಡುತ್ತೇವೆ ಎಂದು ತಿಳಿಸಿದರು.

ಇನ್ನು ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ತನಿಖೆ ಮುಗಿದ ಬಳಿಕ 545 ಹುದ್ದೆಗಳಿಗೆ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ. ಅಲ್ಲದೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವ ಕಾರಣ ಯಾರೂ ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments