ಐದಾರು ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರ; ಆರ್. ಅಶೋಕ್ ಹೇಳಿದ್ದೇನು ಗೊತ್ತಾ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಐದಾರು ಮಂದಿ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪಬಹುದು ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆಗೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿದ್ದಾರೆ. ಹೀಗಾಗಿ ಅವರಿಗೆ ಈ ಕುರಿತಂತೆ ಮಾಹಿತಿ ಇರಬಹುದು ಎಂದು ಹೇಳಿದ್ದಾರೆ.
ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡುವ ಸಂದರ್ಭದಲ್ಲಿ ಯಡಿಯೂರಪ್ಪನವರು ಹಾಗೂ ಕೇಂದ್ರ ನಾಯಕರು ಈ ಕುರಿತಂತೆ ತೀರ್ಮಾನ ಕೈಗೊಳ್ಳಲಿದ್ದಾರೆ. ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕೆಂಬುದರ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.