ಒಪ್ಪಿತ ಸಂಬಂಧ ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಲ್ಲಿಕಾರ್ಜುನ ದೇಸಾಯಿ ಗೌಡರ್. ಎಂಬಾತನ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಐದು ವರ್ಷಗಳ ಪ್ರೀತಿ, ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಐದು ವರ್ಷಗಳ ಸಂಬಂಧ ಬಲವಂತದ್ದೆಂದು ಹೇಳಲು ಸಾಧ್ಯವಿಲ್ಲ. ಒಪ್ಪಿತ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಅತ್ಯಾಚಾರದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಬೆದರಿಕೆ, ಹಲ್ಲೆ ಆರೋಪದ ವಿಚಾರಣೆ ಮುಂದುವರೆಸಲು ಆದೇಶ ನೀಡಿದೆ.