Thursday, August 11, 2022
Google search engine
HomeUncategorizedಕಳೆದ 5 ವರ್ಷಗಳಲ್ಲಿ ರಾಜ್ಯದ 6,137 ರೈತರ ಆತ್ಮಹತ್ಯೆ; ಕೇಂದ್ರ ಸಚಿವರಿಂದಲೇ ಆಘಾತಕಾರಿ ಮಾಹಿತಿ ಬಹಿರಂಗ

ಕಳೆದ 5 ವರ್ಷಗಳಲ್ಲಿ ರಾಜ್ಯದ 6,137 ರೈತರ ಆತ್ಮಹತ್ಯೆ; ಕೇಂದ್ರ ಸಚಿವರಿಂದಲೇ ಆಘಾತಕಾರಿ ಮಾಹಿತಿ ಬಹಿರಂಗ

ಕಳೆದ 5 ವರ್ಷಗಳಲ್ಲಿ ರಾಜ್ಯದ 6,137 ರೈತರ ಆತ್ಮಹತ್ಯೆ; ಕೇಂದ್ರ ಸಚಿವರಿಂದಲೇ ಆಘಾತಕಾರಿ ಮಾಹಿತಿ ಬಹಿರಂಗ

ಕಳೆದ ಐದು ವರ್ಷಗಳ ಅವಧಿಯಲ್ಲಿ ಕರ್ನಾಟಕದ 6,137 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೇ ರಾಜ್ಯಸಭೆಯಲ್ಲಿ ಈ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ.

ರಾಜ್ಯಸಭಾ ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, 2016ರಲ್ಲಿ 1,212, 2017ರಲ್ಲಿ 1,157, 2018 ರಲ್ಲಿ 1,365, 2019 ರಲ್ಲಿ 1,331 2020ರಲ್ಲಿ 1,072 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಅಂದರೆ ಮಹಾರಾಷ್ಟ್ರದಲ್ಲಿ 12,462 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿರುವ ಸಚಿವರು, ನಂತರದ ಸ್ಥಾನಗಳಲ್ಲಿ ತೆಲಂಗಾಣ, ಮಧ್ಯಪ್ರದೇಶ ಹಾಗೂ ಆಂಧ್ರ ಪ್ರದೇಶ ರಾಜ್ಯಗಳು ಇವೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments