Wednesday, February 8, 2023
Google search engine
HomeUncategorizedಕಿರುತೆರೆ ಕಲಾವಿದ ಮಂಡ್ಯ ರವಿ ನಿಧನ

ಕಿರುತೆರೆ ಕಲಾವಿದ ಮಂಡ್ಯ ರವಿ ನಿಧನ

ಕಿರುತೆರೆ ಕಲಾವಿದ ಮಂಡ್ಯ ರವಿ ನಿಧನ

ಬೆಂಗಳೂರು: ಕಿರುತೆರೆ ಕಲಾವಿದ ಮಂಡ್ಯ ರವಿಪ್ರಸಾದ್(42) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲಾವಿದ ರವಿಪ್ರಸಾದ್ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಹಲವು ಧಾರಾವಾಹಿಗಳಲ್ಲಿ ರವಿಪ್ರಸಾದ್ ನಟಿಸಿದ್ದರು. ಟಿ.ಎನ್. ಸೀತಾರಾಮ್ ಅವರ ಅನೇಕ ಧಾರಾವಾಹಿಗಳಲ್ಲಿ ಅವರು ಅಭಿನಯಿಸಿದ್ದರು. ‘ಮಗಳು ಜಾನಕಿ’, ‘ಮಿಂಚು’, ‘ಮುಕ್ತ ಮುಕ್ತ ಮುಕ್ತ’, ‘ಚಿತ್ರಲೇಖ’, ‘ವರಲಕ್ಷ್ಮಿ ಸ್ಟೋರ್ಸ್’ ಮೊದಲಾದ ಧಾರಾವಾಹಿಗಳಲ್ಲಿ ಅವರು ಅಭಿನಯಿಸಿದ್ದಾರೆ.

ಮಂಡ್ಯ ರವಿ ಎಂದೇ ಕರೆಯಲ್ಪಡುತ್ತಿದ್ದ ರವಿಪ್ರಸಾದ್ ‘ಕಾಫಿ ತೋಟ’, ‘ಗಜಲ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಟಿ.ಎಸ್. ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿ ಮೂಲಕ ಅವರು ಕಿರುತೆರೆಗೆ ಪ್ರವೇಶಿಸಿದ್ದರು.

ರವಿಪ್ರಸಾದ್ ಅವರ ಪಾರ್ಥಿವ ಶರೀರವನ್ನು ಮಂಡ್ಯ ನಗರಕ್ಕೆ ಕೊಂಡೊಯ್ಯಲಾಗುತ್ತದೆ. ಮಂಡ್ಯದ ಅನ್ನಪೂರ್ಣೇಶ್ವರಿ ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments