Wednesday, August 10, 2022
Google search engine
HomeUncategorized‘ಕುಕ್ಕೆ ಸುಬ್ರಮಣ್ಯ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

‘ಕುಕ್ಕೆ ಸುಬ್ರಮಣ್ಯ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

‘ಕುಕ್ಕೆ ಸುಬ್ರಮಣ್ಯ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೆಲ ದಿನಗಳಿಂದ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮಳೆ ಈಗ ಮತ್ತೆ ಅಬ್ಬರಿಸುತ್ತಿದೆ. ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನತೆ ಈ ಮಳೆಯಿಂದ ತತ್ತರಿಸಿ ಹೋಗಿದ್ದಾರೆ.

ಇಂತಹ ಸಂದರ್ಭದಲ್ಲೂ ಕೆಲವರು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದು, ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಸಂದರ್ಭದಲ್ಲಿ ಈ ರೀತಿ ಮಾಡುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ. ಧಾರ್ಮಿಕ ಸ್ಥಳ ಸುಬ್ರಹ್ಮಣ್ಯ ಸುತ್ತಮುತ್ತಲೂ ಸಹ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಅಲ್ಲಿಗೆ ತೆರಳಲು ಮುಂದಾಗುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಕ್ತರು ಕುಕ್ಕೆ ಸುಬ್ರಹ್ಮಣ್ಯ ಭೇಟಿಯನ್ನು ಸದ್ಯಕ್ಕೆ ಮುಂದೂಡುವುದು ಸೂಕ್ತ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ತಿಳಿಸಿದ್ದಾರೆ. ಕುಮಾರ ಧಾರ ನದಿಯು ತುಂಬಿ ಹರಿಯುತ್ತಿದ್ದು, ಆದಿ ಸುಬ್ರಹ್ಮಣ್ಯದಲ್ಲಿ ದೇಗುಲದ ಸುತ್ತಮುತ್ತ ನೀರು ಆವರಿಸಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments