Saturday, September 24, 2022
Google search engine
HomeUncategorizedಕೌಟುಂಬಿಕ ಕಲಹ; ಪತ್ನಿ ಮಗುವಿನ‌ ಜೊತೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕೌಟುಂಬಿಕ ಕಲಹ; ಪತ್ನಿ ಮಗುವಿನ‌ ಜೊತೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕೌಟುಂಬಿಕ ಕಲಹ; ಪತ್ನಿ ಮಗುವಿನ‌ ಜೊತೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಪೇದೆಯೊಬ್ಬರು ಪತ್ನಿ ಹಾಗು ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ. 12 ಅಂತಸ್ತಿನ ಕಟ್ಟಡದಿಂದ ತಮ್ಮ ಪತ್ಮಿ ಹಾಗೂ ಮೂರು ವರ್ಷದ ಮಗುವಿನೊಂದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಲ್ದೀಪ್ ಸಿನ್ಹಾ ಯಾದವ್ ಆತ್ಮಹತ್ಯೆಗೆ ಶರಣಾದ ಪೇದೆ. ಇವರು ವಸ್ತ್ರಾಪುರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಗಂಡ ಹೆಂಡತಿಯ ನಡುವೆ ಜಗಳವಾಗಿದೆ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲು ಪೇದೆಯ ಪತ್ನಿ ಕಟ್ಟಡದಿಂದ ಜಿಗಿದಿದ್ದು, ನಂತರ ಪೇದೆ ಮಗುವಿನ ಜೊತೆಗೆ ಜಿಗಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇನ್ನು ಸ್ಥಳಕ್ಕೆ ಸೋಲಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಗಳದಿಂದಲೇ ಈ ಆತ್ಮಹತ್ಯೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments