Thursday, August 11, 2022
Google search engine
HomeUncategorizedಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಯ ಕಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments