Monday, December 5, 2022
Google search engine
HomeUncategorizedಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ರವೀಂದ್ರ ಜಡೇಜಾ ಪತ್ನಿ ? ಕುತೂಹಲ ಕೆರಳಿಸಿದೆ ಈ ಬೆಳವಣಿಗೆ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ರವೀಂದ್ರ ಜಡೇಜಾ ಪತ್ನಿ ? ಕುತೂಹಲ ಕೆರಳಿಸಿದೆ ಈ ಬೆಳವಣಿಗೆ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ರವೀಂದ್ರ ಜಡೇಜಾ ಪತ್ನಿ ? ಕುತೂಹಲ ಕೆರಳಿಸಿದೆ ಈ ಬೆಳವಣಿಗೆ

ಗುಜರಾತ್ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಆಡಳಿತರೂಢ ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಇದರ ಮಧ್ಯೆ ಟೀಮ್ ಇಂಡಿಯಾ ಆಟಗಾರ ರವೀಂದ್ರ ಜಡೇಜಾ ಪತ್ನಿ ಈ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಈಗ ಮೂಡಿದೆ.

ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಖ್ಯಾತ ಉದ್ಯಮಿಯೊಬ್ಬರ ಪುತ್ರಿಯಾಗಿದ್ದು, 2019ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅಲ್ಲದೆ ಸ್ಥಳೀಯ ನಾಯಕಿಯಾಗಿಯೂ ಅವರು ಗುರುತಿಸಿಕೊಂಡಿದ್ದು, ಹೀಗಾಗಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್ ನಗರ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೊಂದು ಗಮನಾರ್ಹ ಸಂಗತಿ ಎಂದರೆ ರವೀಂದ್ರ ಜಡೇಜಾ ಅವರ ಸಹೋದರಿ ನೈನಾ, ಜಾಮ್ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಅವರು ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ರಿವಾಬಾ ಅವರಿಗೆ ಬಿಜೆಪಿ ಹಾಗೂ ನೈನಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕರೆ ಕೌಟುಂಬಿಕ ರಾಜಕೀಯ ಕದನಕ್ಕೆ ಜಾಮ್ ನಗರ ಸಾಕ್ಷಿಯಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments