Sunday, March 26, 2023
Google search engine
HomeUncategorizedತಂದೆಯನ್ನು ಕೊಂದು ಮಲತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ…!

ತಂದೆಯನ್ನು ಕೊಂದು ಮಲತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ…!

ತಂದೆಯನ್ನು ಕೊಂದು ಮಲತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ…!

ಜಜ್ಪುರ್: ಒಡಿಶಾದ ಜಜ್ಪುರ್ ಜಿಲ್ಲೆಯಲ್ಲಿ 20 ವರ್ಷದ ಯುವಕನೊಬ್ಬ ತನ್ನ ತಂದೆಯನ್ನು ಕೊಂದು ನಂತರ ತನ್ನ ಮಲತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದ್ದು, ಟೋಮ್ಕಾ ಪೊಲೀಸ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲತಾಯಿ ತನ್ನ ತಂದೆಯೊಂದಿಗೆ ಇರಲು ಅವಕಾಶ ನೀಡದ ಕಾರಣ ಆ ವ್ಯಕ್ತಿ ಬೇರೆ ಗ್ರಾಮದಲ್ಲಿ ವಾಸಿಸುತ್ತಿದ್ದ. ಭಾನುವಾರ ರಾತ್ರಿ ತಂದೆಯ ಮನೆಗೆ ಹೋದಾಗ ತಂದೆ ಮಲತಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದ. ಇದರಿಂದ ಸಿಟ್ಟಿಗೆದ್ದ ಮಗ ತನ್ನ 65 ವರ್ಷದ ತಂದೆಯನ್ನು ಚಾಕುವಿನಿಂದ ಇರಿದು ಕೊಂದು, ತನ್ನ ಮಲತಾಯಿಯ ಮೇಲೆ ಅತ್ಯಾಚಾರ ಎಸಗಿ ಮನೆಯಿಂದ ಪರಾರಿಯಾಗಿದ್ದಾನೆ.

ಮಹಿಳೆ ದೂರು ನೀಡಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಟೊಮ್ಕಾ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್‌ಪೆಕ್ಟರ್ ಎಸ್‌ಕೆ ಪತ್ರಾ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments