Sunday, January 29, 2023
Google search engine
HomeUncategorizedನಡುರಾತ್ರಿಯಲ್ಲೇ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು….!

ನಡುರಾತ್ರಿಯಲ್ಲೇ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು….!

ನಡುರಾತ್ರಿಯಲ್ಲೇ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ದೂರು ಸಲ್ಲಿಸಿದ ವಿದ್ಯಾರ್ಥಿನಿಯರು….!

ಹಾಸ್ಟೆಲ್ ವಾರ್ಡನ್ ದೌರ್ಜನ್ಯದಿಂದ ಇನ್ನಿಲ್ಲದಂತೆ ಕಂಗೆಟ್ಟಿದ್ದ 60ಕ್ಕೂ ಅಧಿಕ ವಿದ್ಯಾರ್ಥಿನಿಯರು ನಡುರಾತ್ರಿಯಲ್ಲಿ 17 ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾರ್ಖಂಡ್ ನ ಖುಂತ್ಪಾನಿ ಕಸ್ತೂರಬಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿನಿಯರೇ ಇಂತಹದೊಂದು ದಿಟ್ಟ ನಿರ್ಧಾರ ಕೈಗೊಂಡವರಾಗಿದ್ದು, ಇವರೆಲ್ಲರೂ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಭಾನುವಾರ ರಾತ್ರಿ ವಸತಿ ನಿಲಯದಿಂದ ಹೊರಟ ಈ ವಿದ್ಯಾರ್ಥಿನಿಯರು ಬೆಳಗ್ಗೆ 7 ಗಂಟೆ ಸುಮಾರಿಗೆ ಚೈಬಾಸದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ್ದು, ವಿಷಯ ತಿಳಿದ ಜಿಲ್ಲಾಧಿಕಾರಿ ಅನನ್ಯಾ ಮಿತ್ತಲ್ ಕಚೇರಿಗೆ ಧಾವಿಸಿ ಮನವಿ ಪತ್ರ ಸ್ವೀಕರಿಸಿದ್ದಾರೆ. ಅಲ್ಲದೆ ಜಿಲ್ಲಾ ಶಿಕ್ಷಣಾಧಿಕಾರಿಯನ್ನು ಸ್ಥಳಕ್ಕೆ ಕರೆಸಿಕೊಂಡು ಕೂಡಲೇ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments