Wednesday, August 10, 2022
Google search engine
HomeUncategorizedನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತಾ ನಾನೇ ಒಪ್ಪಿಕೊಳ್ಳುತ್ತಿದ್ದೇನೆ; ಮಾಜಿ ಸಚಿವ ಈಶ್ವರಪ್ಪ...

ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತಾ ನಾನೇ ಒಪ್ಪಿಕೊಳ್ಳುತ್ತಿದ್ದೇನೆ; ಮಾಜಿ ಸಚಿವ ಈಶ್ವರಪ್ಪ ಅಚ್ಚರಿಯ ಹೇಳಿಕೆ

ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತಾ ನಾನೇ ಒಪ್ಪಿಕೊಳ್ಳುತ್ತಿದ್ದೇನೆ; ಮಾಜಿ ಸಚಿವ ಈಶ್ವರಪ್ಪ ಅಚ್ಚರಿಯ ಹೇಳಿಕೆ

ದಕ್ಷಿಣ ಕನ್ನಡದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಬಲವಾಗಿ ಖಂಡಿಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಯಾವುದೇ ತಪ್ಪಿಲ್ಲದ ಹಿಂದುತ್ವವಾದಿಗಳನ್ನು ಕೆಲವು ಮುಸಲ್ಮಾನ್ ಗೂಂಡಾಗಳು ಕಗ್ಗೊಲೆ ಮಾಡುವುದು, ಹಲ್ಲೆ ನಡೆಸುವುದು ನಡೆಯುತ್ತಿದೆ. ಇದನ್ನು ಉಗ್ರವಾಗಿ ಖಂಡಿಸುವುದಾಗಿ ಗುಡುಗಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಖಂಡನೆ ಮಾಡಬೇಕು. ಯಾರೂ ಇವರಿಗೆ ಬೆಂಬಲ ಕೊಡಬಾರದು ಎಂದರು.

ಕೊಲೆಗಡುಕರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರ ಬಲಹೀನ, ದೌರ್ಬಲ್ಯ ಅಲ್ಲ. ರಾಜ್ಯದಲ್ಲಿ ಶಾಂತಿ ಕಾಪಾಡಲು ಹಿಂದುಗಳು ಸಂಯಮದಿಂದ ಎಲ್ಲವನ್ನು ಸಹಿಸಿಕೊಂಡು ಹೋಗ್ತಿದ್ದಾರೆ. ಎಷ್ಟು ದಿನದಿಂದ ಶಾಂತಿಯಿಂದ ಇರಲು ಸಾಧ್ಯ ? ನಾಳೆ ಸಿ.ಎಂ. ಜೊತೆ ಮಾತನಾಡುತ್ತೇನೆ. ಕೊಲೆಗಡುಕರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡುತ್ತೇನೆ ಎಂದು ಹೇಳಿದರು.

ಹಿಂದುಗಳು ಶಾಂತಿ ಪ್ರಿಯರು ಅದನ್ನು ಪರೀಕ್ಷೆ ಮಾಡಲು ಹೋಗಬೇಡಿ. ಕೊಲೆಗೆ, ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ. ಆ ರೀತಿಯಾದರೆ ರಾಜ್ಯದಲ್ಲಿ ರಕ್ತಪಾತವೇ ಆಗುತ್ತದೆ. ಅವರ ಮನಸ್ಥಿತಿ ಬದಲಾವಣೆ ಮಾಡಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದುಗಳ ಕೊಲೆಯಾದಾಗ ಹಿಂದುಗಳನ್ನೇ ಜೈಲಿಗೆ ಕಳುಹಿಸುತ್ತಿದ್ದರು. ಹಿಂದುಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತಿದೆ ಎಂದರು.

ಚಿಕ್ಕಮಗಳೂರಿನಲ್ಲಿ ಯುವ ಮೋರ್ಚಾ ಕಾರ್ಯಕರ್ತರ ರಾಜಿನಾಮೆ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತಾ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. ನಮ್ಮ ಕಾರ್ಯಕರ್ತರನ್ನು ಹುಡುಕಿ ಹುಡುಕಿ ಕೊಲೆ ಮಾಡುತ್ತಿದ್ದಾರೆ. ಆದರೆ ರಾಜೀನಾಮೆ ಅದಕ್ಕೆ ಪರಿಹಾರವಲ್ಲ. ಕೊಲೆಗಡುಕರಿಗೆ ಕೊಡುತ್ತಿರುವ ಶಿಕ್ಷೆ ಸಾಕಾಗುತ್ತಿಲ್ಲ. ಕಠಿಣ ಶಿಕ್ಷೆ ಕೊಡುವ ಬಗ್ಗೆ ಕ್ರಮ ವಹಿಸಬೇಕಿದೆ ಎಂದರು.

ಹಿಂದುತ್ವ ಸಿದ್ದಾಂತವನ್ನು ದುರ್ಬಲ ಮಾಡುವ ಪ್ರಯತ್ನ ಮಾಡ್ತಿದ್ದಾರೆ. ಹಿಂದುತ್ವವಾದಿಗಳು ಹೆದರುವ ಪ್ರಶ್ನೆಯೇ ಇಲ್ಲ ಎಂದರು.

ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ ಕಾಂಗ್ರೆಸ್ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಡೀ ದೇಶದಲ್ಲಿ ನ್ಯಾಷನಲ್ ಹೆರಾಲ್ಡ್ ನಲ್ಲಿ ಆಗಿರುವ ಭ್ರಷ್ಟಾಚಾರ ಮತ್ತೊಂದಿಲ್ಲ. 2 ಸಾವಿರ ಕೋಟಿಗೂ ಅಧಿಕ ಲೂಟಿ ಆಗಿದೆ. ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ವಿವರಣೆ ಕೊಡಿ ಅಂದ್ರೆನೇ ಗಲಾಟೆ ಮಾಡ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮನೆಯಲ್ಲಿ ಇಡಿ ದಾಳಿಯಾದಾಗ ಕೋಟಿಗಟ್ಟಲೆ ಹಣ ಪತ್ತೆಯಾಗಿ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಮತ್ತೆ ಇನ್ನೆರಡು ಮೂರು ದಿನದಲ್ಲಿ ವಿಚಾರಣೆಗೆ ಹೋಗ್ತಿದ್ದಾರೆ. ಆದರೆ ಬಿಜೆಪಿಯ‌ನ್ನು ಭ್ರಷ್ಟಾಚಾರ ಅಂತಾ ಕರೆಯುತ್ತಿದ್ದಾರೆ. ನೀವು ಭ್ರಷ್ಟರು ಎಂಬುದು ಗೊತ್ತಾಗಿದೆ. ನಮ್ಮನ್ನು ಭ್ರಷ್ಟರು ಅಂತಾ ಕರೆಯಲು ನಿಮಗೆ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments