Tuesday, December 6, 2022
Google search engine
HomeUncategorizedಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ: ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ, ಕ್ವಿಂಟಲ್ ಗೆ 2540...

ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ: ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ, ಕ್ವಿಂಟಲ್ ಗೆ 2540 ರೂ.

ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ: ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ, ಕ್ವಿಂಟಲ್ ಗೆ 2540 ರೂ.

ಕಾರವಾರ: ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ ಕುಚಲಕ್ಕಿ ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ ನೀಡಲಾಗುವುದು.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಪ್ರತಿ ಕ್ವಿಂಟಲ್ ಕುಚಲಕ್ಕಿ ಭತ್ತಕ್ಕೆ 2040 ರೂ. ಬೆಂಬಲ ಬೆಲೆ ನಿಗದಿ ಮಾಡಲಾಗಿದೆ.  ಕುಚಲಕ್ಕಿ ಬಳಸುವ ಭತ್ತವನ್ನು ಕೇರಳ ರಾಜ್ಯದ ಪಡಿತರ ವ್ಯವಸ್ಥೆಯಡಿ 2220 ರೂ. ನಂತೆ ಖರೀದಿಸಲಾಗುತ್ತಿದ್ದು, ನಮ್ಮ ರಾಜ್ಯದ ಅನೇಕ ರೈತರು ಕೇರಳಕ್ಕೆ ಭತ್ತ ಮಾರಾಟ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಕುಚಲಕ್ಕಿ ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹ ಧನ ನೀಡಿ ಒಟ್ಟು 2540 ರೂ.ನಂತೆ ಭತ್ತ ಖರೀದಿಸಲಾಗುತ್ತಿದೆ. ಶೀಘ್ರವೇ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರದಲ್ಲಿ ಕುಚಲಕ್ಕಿ ನೀಡಲು ಘೋಷಣೆ ಮಾಡಿದ್ದು, ಇದಕ್ಕಾಗಿ ಶೀಘ್ರವೇ ಭತ್ತ ಖರೀದಿ ಕೇಂದ್ರ ಆರಂಭಿಸಲಾಗುವುದು. ಒಂದು ವರ್ಷಕ್ಕೆ 12 ಲಕ್ಷ ಟನ್ ಅಕ್ಕಿ ಬೇಕಾಗುತ್ತದೆ. ಇದಕ್ಕಾಗಿ 18 ಲಕ್ಷ ಟನ್ ಭತ್ತ ಸಂಸ್ಕರಿಸಿಕೊಳ್ಳಬೇಕಿದೆ. ವಾರದಲ್ಲಿ ಬತ್ತ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments