Tuesday, September 27, 2022
Google search engine
HomeUncategorizedಪದವೀಧರರಿಗೆ ಗುಡ್ ನ್ಯೂಸ್: SBI ನ ಒಂದೂವರೆ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಪದವೀಧರರಿಗೆ ಗುಡ್ ನ್ಯೂಸ್: SBI ನ ಒಂದೂವರೆ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಪದವೀಧರರಿಗೆ ಗುಡ್ ನ್ಯೂಸ್: SBI ನ ಒಂದೂವರೆ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ದೇಶದ ಅತ್ಯಂತ ದೊಡ್ಡ ಬ್ಯಾಂಕ್ ಗಳಲ್ಲಿ ಪ್ರಮುಖವಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದೂವರೆ ಸಾವಿರಕ್ಕೂ ಅಧಿಕ ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತಂತೆ ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ಒಟ್ಟು 1,673 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅಕ್ಟೋಬರ್ 12 ಇದಕ್ಕೆ ಅಂತಿಮ ದಿನವಾಗಿದೆ.

ಪದವಿ ಪಡೆದಿರುವ ಅಥವಾ ಅಂತಿಮ ವರ್ಷದ/ಸೆಮಿಸ್ಟರ್ ಪದವಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ ಅಥವಾ 2023ರ ಜನವರಿಯಲ್ಲಿ ಪೂರ್ವಭಾವಿ ಪರೀಕ್ಷೆ ಹಾಗೂ 2023ರ ಜನವರಿ ಅಥವಾ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments