Tuesday, September 27, 2022
Google search engine
HomeUncategorizedಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ವತಿಯಿಂದ ಸೆ.7 ರಿಂದ 17 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿ ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಸೆ.6 ಸಂಜೆ 5 ಗಂಟೆ ಒಳಗೆ ಈ ಕಚೇರಿಯಲ್ಲಿ ನೋಂದಣಿ ಮಾಡತಕ್ಕದ್ದು, ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಈ ತರಬೇತಿಯು ಸೆ. 7 ರ ಬೆಳಿಗ್ಗೆ 10 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ(ಪ್ರಯಾಣ ಭತ್ಯೆ ಹಾಗೂ ಊಟದ ವ್ಯವಸ್ಥೆ ಇರುವುದಿಲ್ಲ) ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08192-259446 ಹಾಗೂ ಮೊಬೈಲ್ ಸಂಖ್ಯೆ:7406323294 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments