Sunday, September 25, 2022
Google search engine
HomeUncategorizedಪ್ರಧಾನಿ ಮೋದಿ ಜನ್ಮ ದಿನದಂದು ಬಂಪರ್ ಗಿಫ್ಟ್; ಈ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಸಿಗಲಿದೆ...

ಪ್ರಧಾನಿ ಮೋದಿ ಜನ್ಮ ದಿನದಂದು ಬಂಪರ್ ಗಿಫ್ಟ್; ಈ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಸಿಗಲಿದೆ ಬಂಗಾರದ ಉಂಗುರ

ಪ್ರಧಾನಿ ಮೋದಿ ಜನ್ಮ ದಿನದಂದು ಬಂಪರ್ ಗಿಫ್ಟ್; ಈ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಸಿಗಲಿದೆ ಬಂಗಾರದ ಉಂಗುರ

ಪ್ರಧಾನಿ ನರೇಂದ್ರ ಮೋದಿಯವರು ನಾಳೆ 72ನೇ ವಸಂತಕ್ಕೆ ಕಾಲಿಡಲಿದ್ದು, ಇವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು, ಬಿಜೆಪಿ ನಾಯಕರು ಮುಂದಾಗಿದ್ದಾರೆ. ರಕ್ತದಾನ ಶಿಬಿರ, ಮೆಡಿಕಲ್ ಕ್ಯಾಂಪ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದರ ಮಧ್ಯೆ ತಮಿಳುನಾಡಿನ ಬಿಜೆಪಿ ಘಟಕ ವಿಭಿನ್ನ ಕಾರ್ಯಕ್ಕೆ ಮುಂದಾಗಿದೆ.

ತಮಿಳುನಾಡಿನ RSRM ಆಸ್ಪತ್ರೆಯಲ್ಲಿ ನಾಳೆ ಜನಿಸುವ ಪ್ರತಿಯೊಂದು ಮಗುವಿಗೂ ಎರಡು ಗ್ರಾಂ ತೂಕದ ಬಂಗಾರದ ಉಂಗುರವನ್ನು ನೀಡಲು ತೀರ್ಮಾನಿಸಲಾಗಿದ್ದು, ಈ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 17 ರಂದು ಹತ್ತರಿಂದ ಹದಿನೈದು ಮಕ್ಕಳು ಜನಿಸಬಹುದು ಎಂದು ಅಂದಾಜಿಸಲಾಗಿದೆ.

ಇದರ ಜೊತೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕ್ಷೇತ್ರದಲ್ಲಿ ತಮಿಳುನಾಡು ಬಿಜೆಪಿ ಘಟಕದಿಂದ ಜನತೆಗೆ 720 ಕೆಜಿ ಮೀನುಗಳನ್ನು ವಿತರಿಸಲಾಗುತ್ತಿದ್ದು, ಪ್ರಧಾನಿ ಮೋದಿಯವರು 72ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯ ಮಾಡಲಾಗುತ್ತಿದೆ. ಈ ವಿಚಾರವನ್ನು ಮುಖಂಡ ಮುರುಗನ್ ಹಂಚಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments