Friday, October 7, 2022
Google search engine
HomeUncategorizedಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ: ಸೇವಾ ಪಾಕ್ಷಿಕ ಅಭಿಯಾನ

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ: ಸೇವಾ ಪಾಕ್ಷಿಕ ಅಭಿಯಾನ

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ: ಸೇವಾ ಪಾಕ್ಷಿಕ ಅಭಿಯಾನ

ಬೆಂಗಳೂರು: ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ.

ರಾಜ್ಯದ ಜನರ ಪರವಾಗಿ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಇಂದು ಬಹಳ ಸಂತೋಷದ ದಿನವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಧಾನಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಮೋದಿ ಅವರು ಸಾಕಷ್ಟು ಕಾರ್ಯಕ್ರಮ ನೀಡಿದ್ದಾರೆ. 4 ಸಲ ಮುಖ್ಯಮಂತ್ರಿ ಆಗಿದ್ದೆ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಪ್ರಧಾನಿಯಾಗಿ ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದ್ದಾರೆ. ರೈತರಿಗಾಗಿ ಕಿಸಾನ್ ಸಮ್ಮಾನ್, ಆರೋಗ್ಯ ಯೋಜನೆ, ಹೊಸ ಶಿಕ್ಷಣ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ, ಕೊರೋನಾ ನಿರ್ವಹಣೆಯಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

ಸೇವಾ ಸಪ್ತಾಹ ಕಾರ್ಯಕ್ರಮದ ಮೂಲಕ ಮುಂದಿನ ತಿಂಗಳು ಸಾರ್ವಜನಿಕ ಸೇವೆ ಕಾರ್ಯಕ್ರಮ ಕೈಗೊಳ್ಳಲಾಗುವುದು. ಪ್ರಧಾನ ಮಂತ್ರಿ ಮೋದಿಯವರಿಗೆ ಬಲ ತುಂಬುವ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯವರಿಗೆ ಸಿಎಂ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಪ್ರತಿ ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಾಕ್ಷಿಕ ಅಭಿಯಾನ ಕೈಗೊಳ್ಳಲಾಗಿದೆ. ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ದಿವ್ಯಾಂಗರಿಗೆ ಕೃತಕ ಅಂಗ/ ಉಪಕರಣಗಳ ವಿತರಣೆ, ಕೋವಿಡ್ ಲಸಿಕಾ ಕೇಂದ್ರದಲ್ಲಿ ಸೇವಾ ಕಾರ್ಯ, ವನಮಹೋತ್ಸವ, ಸ್ವಚ್ಛತಾ ಅಭಿಯಾನ, ಜಲವೇ ಜೀವನ ಜಾಗೃತಿ ಅಭಿಯಾನ ಸೇರಿದಂತೆ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments