Friday, March 24, 2023
Google search engine
HomeUncategorizedಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ.

ಇಂದಿನಿಂದ ವೇತನ ಪರಿಷ್ಕರಣೆ ಮತ್ತು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಕೆ.ಎಸ್.ಆರ್.ಟಿ.ಸಿ. ಮತ್ತು ಬಿಎಂಟಿಸಿಯಿಂದ ಈ ಕುರಿತು ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಸರ್ಕಾರಿ ನೌಕರರ ಸಂಘಗಳು ಇಂದಿನಿಂದ ಮುಷ್ಕರಕ್ಕೆ ಕರೆ ನೀಡಿದ್ದರೂ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹೇಳಲಾಗಿದೆ.

ಬಸ್ ಗಳ ಕಾರ್ಯನಿರ್ವಹಣೆ ಎಂದಿನಂತೆ ಇರುತ್ತದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಇರುತ್ತದೆ. ಕೆಎಸ್ಆರ್ಟಿಸಿ ಬಸ್ ಗಳು ಎಲ್ಲಾ ಮಾರ್ಗಗಳಲ್ಲಿ ಸಂಚರಿಸಲಿದ್ದು, ಪ್ರಯಾಣಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments