Thursday, August 11, 2022
Google search engine
HomeUncategorizedಬಿಜೆಪಿಗಿದೆ ಸಾರ್ವಜನಿಕ ಆಸ್ತಿಗಳನ್ನು ಹಾಳುಗೆಡವಿದ ಭವ್ಯ ಇತಿಹಾಸ…! ತೇಜಸ್ವಿ ಸೂರ್ಯರ ಕಲ್ಲು ಹೊಡೆಯುವ ಹೇಳಿಕೆ ಉಲ್ಲೇಖಿಸಿ...

ಬಿಜೆಪಿಗಿದೆ ಸಾರ್ವಜನಿಕ ಆಸ್ತಿಗಳನ್ನು ಹಾಳುಗೆಡವಿದ ಭವ್ಯ ಇತಿಹಾಸ…! ತೇಜಸ್ವಿ ಸೂರ್ಯರ ಕಲ್ಲು ಹೊಡೆಯುವ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವ್ಯಂಗ್ಯ

ಬಿಜೆಪಿಗಿದೆ ಸಾರ್ವಜನಿಕ ಆಸ್ತಿಗಳನ್ನು ಹಾಳುಗೆಡವಿದ ಭವ್ಯ ಇತಿಹಾಸ…! ತೇಜಸ್ವಿ ಸೂರ್ಯರ ಕಲ್ಲು ಹೊಡೆಯುವ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವ್ಯಂಗ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಬರ್ಬರ ಹತ್ಯೆ ಬಳಿಕ ಇದನ್ನು ಖಂಡಿಸಿ ಯುವ ಮೋರ್ಚಾದ ಹಲವು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರ ಹಿನ್ನಲೆಯಲ್ಲಿ ಅವರ ಮನವೊಲಿಸಲು ಮುಂದಾಗಿದ್ದ ಸಂಸದ ತೇಜಸ್ವಿ ಸೂರ್ಯ, ಪದಾಧಿಕಾರಿಯೋರ್ವರಿಗೆ ಕರೆ ಮಾಡಿದ್ದ ವೇಳೆ ಆಡಿದ್ದರೆನ್ನಲಾದ ಮಾತಿನ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವುದು ನಮ್ಮ ಪಕ್ಷ. ಕಾಂಗ್ರೆಸ್‌ ಅಧಿಕಾರದಲ್ಲಿದ್ದರೆ ಕಲ್ಲು ಹೊಡೆಯಬಹುದಾಗಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದರೆನ್ನಲಾಗಿದ್ದು, ಇದರ ಅಡಿಯೋ ಹರಿದಾಡಿತ್ತು. ಇದೀಗ ರಾಜ್ಯ ಕಾಂಗ್ರೆಸ್‌, ತೇಜಸ್ವಿ ಸೂರ್ಯ ಅವರ ಈ ಮಾತುಗಳನ್ನಿಟ್ಟುಕೊಂಡು ವ್ಯಂಗ್ಯ ಮಾಡಿದೆ.

ಕಾಂಗ್ರೆಸ್ ಸರ್ಕಾರವಿದ್ದಾಗ ಕಲ್ಲು ಹೊಡೆದ, ಸಾರ್ವಜನಿಕ ಆಸ್ತಿಗಳನ್ನು ಹಾಳುಗೆಡವಿದ ಭವ್ಯ ಇತಿಹಾಸವನ್ನೇ ಹೊಂದಿದೆ ಬಿಜೆಪಿ ! ಅಂದು ನಾವು ಬುಲ್ಡೋಸರ್ ಹತ್ತಿಸಿದ್ದರೆ ಇಂದು ಈ ಸಮಾಜಘಾತುಕರು ಚಿಗುರುತ್ತಿರಲಿಲ್ಲ, ಆದರೆ ನಾವು ಸಂವಿಧಾನದ ವಿರುದ್ಧ ವರ್ತಿಸುವ ತಪ್ಪು ಮಾಡಲಿಲ್ಲ. ಈಗ ಅವರ ವಿರುದ್ಧವೇ ಜನಾಕ್ರೋಶದ ಕಲ್ಲುಗಳು ಬೀಳುತ್ತಿವೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments