Wednesday, August 10, 2022
Google search engine
HomeUncategorizedಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಸ್.ಎಸ್. ಪ್ರಚಾರಕ ರಾಜೇಶ್

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಸ್.ಎಸ್. ಪ್ರಚಾರಕ ರಾಜೇಶ್

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಸ್.ಎಸ್. ಪ್ರಚಾರಕ ರಾಜೇಶ್

ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಅರುಣ್ ಕುಮಾರ್ ಬದಲಿಗೆ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನವರಾದ ರಾಜೇಶ್ ತುಮಕೂರು ವಿಭಾಗದ ಪ್ರಚಾರಕರಾಗಿದ್ದರು. 12 ವರ್ಷದಿಂದ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಮೂಲಕ ಬಿಜೆಪಿ ಸಂಘಟನಾ ಕಾರ್ಯದರ್ಶಿಯನ್ನು ಬದಲಾವಣೆ ಮಾಡಲಾಗಿದ್ದು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ರಾಜೇಶ್ ಆರ್.ಎಸ್.ಎಸ್. ತುಮಕೂರು ವಿಭಾಗದ ಪ್ರಚಾರಕರಾಗಿದ್ದಾರೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರುಣ್ ಕುಮಾರ್ ಅವರನ್ನು ಆರ್.ಎಸ್.ಎಸ್. ಉತ್ತರ -ದಕ್ಷಿಣ ಕರ್ನಾಟಕ ಪ್ರಾಂತ್ಯ ಪ್ರಚಾರ ಪ್ರಮುಖ್ ಆಗಿ ನೇಮಕ ಮಾಡಲಾಗಿದೆ.

ಅಲೆಮಾರಿ ಅಭಿವೃದ್ಧಿ ಸಂಘಟನೆಗೆ ಪ್ರಚಾರಕ ಸುರೇಶ್ ಅವರನ್ನು ನೇಮಕ ಮಾಡಲಾಗಿದೆ. ಹಿಂದೂ ಸೇವಾ ಪ್ರತಿಷ್ಠಾನಕ್ಕೆ ಪ್ರಚಾರಕ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ದೇವಾಲಯಗಳ ಅಭಿವೃದ್ಧಿ ವಿಭಾಗಕ್ಕೆ ಪ್ರಚಾರಕ ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments