Friday, December 9, 2022
Google search engine
HomeUncategorizedಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು

ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು

ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಮೂವರು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಮಾರತ್ ಹಳ್ಳಿ ಠಾಣೆ ಪೊಲೀಸರು ಮೂವರಿಗೆ ಸೂಚನೆ ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ಕೂಗಿಲ್ಲ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ನಿನ್ನೆ ವಿಚಾರಣೆ ನಡೆಸಿ ಮೂವರನ್ನು ಪೊಲೀಸರು ವಾಪಸ್ ಕಳುಹಿಸಿದ್ದರು. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಮೂವರಿಗೆ ಸೂಚನೆ ನೀಡಲಾಗಿದೆ.

ಮಾರತಹಳ್ಳಿಯ ನ್ಯೂ ಹಾರಿಜನ್ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯನ್, ರಿಯಾ ರವೀಂದ್ರನ್, ದಿನಕರ್ ಎಂಬುವರು ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಈ ವಿಡಿಯೋವನ್ನು ಮತ್ತೊಬ್ಬ ವಿದ್ಯಾರ್ಥಿ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments