Sunday, September 25, 2022
Google search engine
HomeUncategorizedಬೆಳಗಾವಿಗೆ ಉಮೇಶ್ ಕತ್ತಿ ಮೃತದೇಹ ಏರ್ ಲಿಫ್ಟ್: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ಬೆಳಗಾವಿಗೆ ಉಮೇಶ್ ಕತ್ತಿ ಮೃತದೇಹ ಏರ್ ಲಿಫ್ಟ್: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ಬೆಳಗಾವಿಗೆ ಉಮೇಶ್ ಕತ್ತಿ ಮೃತದೇಹ ಏರ್ ಲಿಫ್ಟ್: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಮೃತದೇಹವನ್ನು ಎಂಎಸ್. ರಾಮಯ್ಯ ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಹೆಚ್ಎಎಲ್ ಗೆ ಸ್ಥಳಾಂತರ ಮಾಡಲಾಗಿದೆ. ವಿಶೇಷ ವಿಮಾನದಲ್ಲಿ ಹೆಚ್ಎಎಲ್ ನಿಂದ ಬೆಳಗಾವಿಗೆ ಪಾರ್ಥಿವ ಶರೀರ ಏರ್ ಲಿಫ್ಟ್ ಮಾಡಲಾಗುವುದು.

ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಲ್ಲದಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗವಿ ಶಿವಬಸವನಗರದ ನಿವಾಸದಲ್ಲಿ ಬೆಳಗ್ಗೆ 9 ಗಂಟೆಯಿಂದ 10:30ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆ ಮಧ್ಯಾಹ್ನ 3:30ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments