Friday, December 9, 2022
Google search engine
HomeUncategorizedಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಕೊಲೆ

ಮೈಸೂರು: ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮೈಸೂರಿನ ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ.

ಮನೋಜ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅದೇ ಗ್ರಾಮದ ರಘು, ಸಚಿನ್, ಕಿರಣ್, ಶಂಕರ್ ಕೃತ್ಯವಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸಣ್ಣ ಪುಟ್ಟ ವಿಚಾರಗಳಿಗೆ ಆಗಾಗ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಹುಟ್ಟುಹಬ್ಬ ಆಚರಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಇವರ ನಡುವೆ ಗಲಾಟೆಯಾಗಿತ್ತು. ಇದೇ ವಿಚಾರಕ್ಕೆ ಮನೋಜ್ ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೃತ್ಯವೆಸಗಿದ ನಂತರ ಆರೋಪಿಗಳ ತಂಡ ಪರಾರಿಯಾಗಿದೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments