Thursday, August 11, 2022
Google search engine
HomeUncategorizedಭಕ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಧಾರ್ಮಿಕ ಕ್ಷೇತ್ರಗಳಲ್ಲಿ ಛತ್ರ ನಿರ್ಮಾಣ, ಅಭಿವೃದ್ಧಿಗೆ ವಿಶೇಷ ಅನುದಾನ

ಭಕ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಧಾರ್ಮಿಕ ಕ್ಷೇತ್ರಗಳಲ್ಲಿ ಛತ್ರ ನಿರ್ಮಾಣ, ಅಭಿವೃದ್ಧಿಗೆ ವಿಶೇಷ ಅನುದಾನ

ಭಕ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಧಾರ್ಮಿಕ ಕ್ಷೇತ್ರಗಳಲ್ಲಿ ಛತ್ರ ನಿರ್ಮಾಣ, ಅಭಿವೃದ್ಧಿಗೆ ವಿಶೇಷ ಅನುದಾನ

ಬೆಂಗಳೂರು: ಕೇರಳದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಶಬರಿಮಲೆಯಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಛತ್ರ ನಿರ್ಮಾಣ ಮಾಡಲಾಗುತ್ತದೆ.

ಮಂತ್ರಾಲಯ ಛತ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 4 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ತೆರಳುತ್ತಾರೆ. ಭಕ್ತರಿಗೆ ಅನುಕೂಲವಾಗುವಂತೆ ಕರ್ನಾಟಕ ಛತ್ರ ನಿರ್ಮಾಣ ಮಾಡಲಾಗುವುದು.

ಮಹಾರಾಷ್ಟ್ರದ ಫಂಡರಾಪುರದಲ್ಲಿರುವ ಕರ್ನಾಟಕ ಛತ್ರಕ್ಕೆ 3 ಕೋಟಿ ರೂ., ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ 3 ಕೋಟಿ ರೂ., ಗಾಣಗಾಪುರದ ದತ್ತಾತ್ರೇಯ ಸ್ವಾಮಿ ದೇವಸ್ಥಾನಕ್ಕೆ 3 ಕೋಟಿ ರೂ., ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಸಿದ್ದಗಿರಿ ಮಠಕ್ಕೆ 3 ಕೋಟಿ ರೂ., ಎಡೆಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ 3 ಕೋಟಿ ರೂ., ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ 3 ಕೋಟಿ ರೂ., ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ 3 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments