ಭದ್ರಾ ಜಲಾಶಯದಿಂದ ಪ್ರತಿದಿನ 500 ಕ್ಯೂಸೆಕ್ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಜ. 27 ರಿಂದ ಫೆ. 6 ರವರೆಗೆ ಪ್ರತಿ ದಿನ 500 ಕ್ಯೂಸೆಕ್ ನಂತೆ ಒಟ್ಟು 5500 ಕ್ಯೂಸೆಕ್ ನೀರು ಹರಿಸಲಾಗುವುದು.
ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.