ಮಣಿಪಾಲದ ಶಿಲ್ಪಿ ಡಾ. ಟಿ.ಎಂ.ಎ. ಪೈ ಅವರ ಹಿರಿಯ ಪುತ್ರ ಮೋಹನ್ ದಾಸ್ ಎಂ ಪೈ ಇನ್ನಿಲ್ಲ
ಮಣಿಪಾಲ ಎಂಬ ಪುಟ್ಟ ಗ್ರಾಮವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದು ಡಾ. ಟಿ.ಎಂ.ಎ. ಪೈ. ಅದನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ದು ಅವರ ಪುತ್ರರು ಹಾಗೂ ಪುತ್ರಿಯರು.
ಇದೀಗ ಅವರ ಹಿರಿಯ ಪುತ್ರ 89 ವರ್ಷದ ಟಿ. ಮೋಹನ್ ದಾಸ್ ಎಂ ಪೈ ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಡಾ. ಟಿ.ಎಂ.ಎ. ಪೈ ಫೌಂಡೇಶನ್ ಹಾಗೂ ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷರಾಗಿದ್ದ ಅವರ ನಿಧನದ ಹಿನ್ನೆಲೆಯಲ್ಲಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಎಂಜಿಎಂ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.