Wednesday, August 17, 2022
Google search engine
HomeUncategorizedಮನೆ ಹಾನಿಗೊಳಗಾದ ಸಂತ್ರಸ್ಥರ ಖಾತೆಗೆ 5 ಲಕ್ಷ ರೂ., ಸರ್ಕಾರದಿಂದ 300 ಕೋಟಿ ಪರಿಹಾರ ಬಿಡುಗಡೆ

ಮನೆ ಹಾನಿಗೊಳಗಾದ ಸಂತ್ರಸ್ಥರ ಖಾತೆಗೆ 5 ಲಕ್ಷ ರೂ., ಸರ್ಕಾರದಿಂದ 300 ಕೋಟಿ ಪರಿಹಾರ ಬಿಡುಗಡೆ

ಮನೆ ಹಾನಿಗೊಳಗಾದ ಸಂತ್ರಸ್ಥರ ಖಾತೆಗೆ 5 ಲಕ್ಷ ರೂ., ಸರ್ಕಾರದಿಂದ 300 ಕೋಟಿ ಪರಿಹಾರ ಬಿಡುಗಡೆ

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ರಾಜ್ಯ ಸರ್ಕಾರ 300 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸಂತ್ರಸ್ತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲು ಸೂಚನೆ ನೀಡಲಾಗಿದೆ.

ಮಳೆ, ಪ್ರವಾಹದಿಂದ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ., ಬಹುತೇಕ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ ರೂ., ಭಾಗಶಃ ಹಾನಿಗೊಳಗಾದ ಮನೆಗಳಿಗೆ 50,000 ರೂ. ಪರಿಹಾರ ನೀಡಲಾಗುವುದು. ರಾಜ್ಯದ ಅನೇಕ ಭಾಗದಲ್ಲಿ ಭಾರಿ ಮಳೆ ಪ್ರವಾಹದಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ಮಾರ್ಗಸೂಚಿ ಹೊರತುಪಡಿಸಿ ರಾಜ್ಯ ಸರ್ಕಾರ ಹೆಚ್ಚುವರಿ ಮೊತ್ತ ನೀಡಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡುವಂತೆ ಸೂಚನೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments