Sunday, September 25, 2022
Google search engine
HomeUncategorizedಮಳೆಹಾನಿ ಪರಿಶೀಲನೆ ಬಂದು ಹಳ್ಳದ ನೀರಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹರಸಾಹಸ ಮಾಡಿ ರಕ್ಷಿಸಿದ ಸ್ಥಳೀಯರು

ಮಳೆಹಾನಿ ಪರಿಶೀಲನೆ ಬಂದು ಹಳ್ಳದ ನೀರಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹರಸಾಹಸ ಮಾಡಿ ರಕ್ಷಿಸಿದ ಸ್ಥಳೀಯರು

ಮಳೆಹಾನಿ ಪರಿಶೀಲನೆ ಬಂದು ಹಳ್ಳದ ನೀರಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹರಸಾಹಸ ಮಾಡಿ ರಕ್ಷಿಸಿದ ಸ್ಥಳೀಯರು

ಚಾಮರಾಜನಗರ: ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ನೀರಿನಲ್ಲಿ ಸಿಲುಕಿದ್ದು, ಹಳ್ಳದ ನೀರಿನಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ -ಆಲೂರು ನಡುವೆ ನಡೆದಿದೆ.

ಮಳೆ ಹಾನಿ ಪರಿಶೀಲನೆ ನಡೆಸಿ ಅಧಿಕಾರಿಗಳು ಕಾರ್ ನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಹಳ್ಳದ ನೀರಿನಲ್ಲಿ ಸಿಲುಕಿದ್ದಾರೆ. ಹಳ್ಳ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಹೆಚ್ಚಳವಾಗಿ ಹಳ್ಳದ ನೀರಿನಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಕಾರ್ ಮೇಲೆ ಹತ್ತಿ ನಿಂತುಕೊಂಡಿದ್ದಾರೆ.

ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರ್ ಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments