Friday, October 7, 2022
Google search engine
HomeUncategorized‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ ತತ್ತರಿಸಿ ಹೋಗಿದ್ದರು.

ಮಳೆ ಮತ್ತಷ್ಟು ದಿನಗಳ ಕಾಲ ಮುಂದುವರಿಯಲಿದೆಯಾ ಎಂಬ ಆತಂಕದಲ್ಲಿದ್ದ ಜನತೆಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ರಾಜ್ಯದಲ್ಲಿ ಈಗಾಗಲೇ ಮಳೆ ಆರ್ಭಟ ಕಡಿಮೆಯಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದೆ.

ಮುಂದಿನ ಐದು ದಿನಗಳ ಕಾಲ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಯ ಕೆಲವು ಕಡೆ ತುಂತುರು ಮಳೆಯಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments