Saturday, November 26, 2022
Google search engine
HomeUncategorizedಯುಗದ ಕವಿ – ಜಗದ ಕವಿಯ ಕನ್ನಡಾಭಿಮಾನ

ಯುಗದ ಕವಿ – ಜಗದ ಕವಿಯ ಕನ್ನಡಾಭಿಮಾನ

ಯುಗದ ಕವಿ – ಜಗದ ಕವಿಯ ಕನ್ನಡಾಭಿಮಾನ

‘ಜಯ ಭಾರತ ಜನನಿಯ ತನುಜಾತೆ’, ‘ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಓ ನನ್ನ ಚೇತನ ಆಗು ನೀ ಅನಿಕೇತನ’ ಹೀಗೆ ಅನೇಕ ಕವನಗಳನ್ನು ನೀಡಿದ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಕುವೆಂಪು ಎಂದೆಂದಿಗೂ ಅಜರಾಮರ.

ರಾಷ್ಟ್ರಕವಿ ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ 1904 ಡಿಸೆಂಬರ್ 29 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾವರು. ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು.

ವರಕವಿ ಬೇಂದ್ರೆಯವರು ಕುವೆಂಪು ಅವರಿಗೆ ಯುಗದ ಕವಿ ಜಗದ ಕವಿ ಎಂದು ಕರೆದಿದ್ದಾರೆ. ವಿಶ್ವಮಾನವ ಸಂದೇಶ ನೀಡಿದವರು ಕುವೆಂಪು. ಕನ್ನಡದ ಎರಡನೆಯ ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರ್ಕಾರ ನೀಡುವ ಕರ್ನಾಟಕ ರತ್ನ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಶ್ರೀರಾಮಾಯಣ ದರ್ಶನಂ ಮಹಾಕಾವ್ಯ, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳನ್ನು ರಚಿಸಿದ್ದಾರೆ. ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಶೂದ್ರ ತಪಸ್ವಿ, ಜಲಗಾರ, ಯಮನಸೋಲು, ಬೊಮ್ಮನಹಳ್ಳಿ ಕಿಂದರಿ ಜೋಗಿ, ಇತರೆ ನಾಟಕಗಳನ್ನು ಕೊಟ್ಟಿದ್ದಾರೆ. ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳನ್ನು ನೀಡಿದ್ದಾರೆ. ಅಷ್ಟೆ ಅಲ್ಲ ವಿಮರ್ಶೆ, ಮೀಮಾಂಸೆ, ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ.

ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರು ಜನಿಸಿದ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ. 1987 ರಲ್ಲಿ ಶಿವಮೊಗ್ಗದಲ್ಲಿ ಕುವೆಂಪುರವರ ಗೌರವಾರ್ಥವಾಗಿ ಕುವೆಂಪು ವಿಶ್ವವಿದ್ಯಾಲಯ ಸ್ಥಾಪಿಸಲಾಯಿತು. ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ ನಾಟಕಕಾರ, ವಿಮರ್ಶಕ ಮತ್ತು ಚಿಂತಕ, ಇಪ್ಪತ್ತನೆಯ ಶತಮಾನದಲ್ಲಿ ಕಂಡ ದೈತ್ಯ ಪ್ರತಿಭೆ ಕುವೆಂಪು. ಇವರು ನವೆಂಬರ್ 11, 1994 ಮೈಸೂರಿನಲ್ಲಿ ವಿಧಿವಶರಾದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments