Monday, December 5, 2022
Google search engine
HomeUncategorizedರೈತರೇ ಜು. 31 ರೊಳಗೆ ಈ ಕೆಲಸ ಮಾಡಿ ಖಾತೆಗೆ ಹಣ ಪಡೆಯಿರಿ: ಪಿಎಂ ಕಿಸಾನ್...

ರೈತರೇ ಜು. 31 ರೊಳಗೆ ಈ ಕೆಲಸ ಮಾಡಿ ಖಾತೆಗೆ ಹಣ ಪಡೆಯಿರಿ: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ

ರೈತರೇ ಜು. 31 ರೊಳಗೆ ಈ ಕೆಲಸ ಮಾಡಿ ಖಾತೆಗೆ ಹಣ ಪಡೆಯಿರಿ: ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಇ-ಕೆವೈಸಿ ಕಡ್ಡಾಯ

ಧಾರವಾಡ: ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಇ-ಕೆವೈಸಿ ಕಡ್ಡಾಯವಾಗಿ ಮಾಡಿಕೊಳ್ಳಲು ಸೂಚಿಸಿದೆ.

ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಈ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ಮಾಡಿಕೊಳ್ಳಬಹುದಾಗಿದೆ. ಇ-ಕೆವೈಸಿ ಮಾಡಿಕೊಳ್ಳಲು ಜುಲೈ-31 ಕೊನೆಯ ದಿನಾಂಕವಾಗಿರುತ್ತದೆ.

ಇ-ಕೆವೈಸಿಯನ್ನು ಓಟಿಪಿ ಮುಖಾಂತರ ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್‍ಸೈಟ್‍ನಲ್ಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ್ ನಂಬರ್ ಹಾಗೂ ಕ್ಯಾಪ್‍ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.

ಇ-ಕೆವೈಸಿಯನ್ನು ಬಯೋಮೆಟ್ರಿಕ್ ಮುಖಾಂತರ ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಕ್ಕೆ ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, 15 ರೂ.ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments