Saturday, November 26, 2022
Google search engine
HomeUncategorizedಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ಅರೆಸ್ಟ್: ರಹಸ್ಯ ಕೋಣೆಯಲ್ಲಿದ್ದ ಮಹಿಳೆಯರ ರಕ್ಷಣೆ

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ಅರೆಸ್ಟ್: ರಹಸ್ಯ ಕೋಣೆಯಲ್ಲಿದ್ದ ಮಹಿಳೆಯರ ರಕ್ಷಣೆ

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ಅರೆಸ್ಟ್: ರಹಸ್ಯ ಕೋಣೆಯಲ್ಲಿದ್ದ ಮಹಿಳೆಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಮೂರು ಲಾಡ್ಜ್ ಗಳ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 9 ಮಂದಿಯನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದೆ.

ಕಾಟನ್ ಪೇಟೆ, ಸಿಟಿ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಮೂರು ಲಾಡ್ಜ್ ಗಳಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಮಾಹಿತಿ ಕಲೆಹಾಕಿದ ಪೊಲೀಸರು ಆ ಲಾಡ್ಜ್ ಗಳ ಮೇಲೆ ದಾಳಿ ನಡೆಸಿದ್ದಾರೆ.

ಲಾಡ್ಜ್ ಗಳ ವ್ಯವಸ್ಥಾಪಕರು, ಸಿಬ್ಬಂದಿ ಸೇರಿ 9 ಮಂದಿಯನ್ನು ಬಂಧಿಸಲಾಗಿದೆ. ಕೆಲಸ ಕೊಡಿಸುವುದಾಗಿ ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಕಾಟನ್ ಪೇಟೆ ಲಾಡ್ಜ್ ನಲ್ಲಿ ರಹಸ್ಯ ಕೋಣೆಯಲ್ಲಿ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಕೊಠಡಿಯ ಗೋಡೆಯನ್ನು ಮೂರು ಅಡಿಯಷ್ಟು ತೊರೆದು ಅದಕ್ಕೆ ಗೊತ್ತಾಗದಂತೆ ಟೈಲ್ಸ್ ಬಾಗಿಲು ಮಾಡಿ ಅದರೊಳಗೆ ಪ್ರವೇಶಿಸಿ ಪುಟ್ಟ ಕೋಣೆಯಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments