Thursday, August 11, 2022
Google search engine
HomeUncategorizedಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾನಾಪುರ ಬಳಿ ತಡರಾತ್ರಿ ಸಂಭವಿಸಿದೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ಸಮೀಪ ನಡೆದ ಅಪಘಾತದಲ್ಲಿ ಸ್ಕಾರ್ಪಿಯೋ ದಲ್ಲಿದ್ದ ಐವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ದೇವಪ್ಪ, ಗಿರಿಜಮ್ಮ, ಶಾಂತಮ್ಮ, ಗಿರಿಜಮ್ಮ, ಪಾರವ್ವ ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದವರು. ಕೊಪ್ಪಳದಿಂದ ಬಿನ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬರ್ತಡೇ ಪಾರ್ಟಿ ಮುಗಿಸಿಕೊಂಡು ಹೋಗುವಾಗ ಘಟನೆ ನಡೆದಿದೆ. ನಾಲ್ವರು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments