ಶಾಸಕ ಮಾಡಾಳ್ ಗೆ ಮತ್ತೊಂದು ಸಂಕಷ್ಟ: ಅಕ್ರಮ ಆಸ್ತಿ ಸಂಪಾದನೆಯಡಿ ಪ್ರತ್ಯೇಕ ಎಫ್ಐಆರ್ ಗೆ ಚಿಂತನೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಲಂಚ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಈಗ ಅಕ್ರಮ ಆಸ್ತಿ ಸಂಕಷ್ಟ ಎದುರಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರನ ಮೇಲೆ ಪ್ರತ್ಯೇಕವಾಗಿ ಆಕ್ರಮ ಆಸ್ತಿ ಸಂಪಾದನೆ ಆರೋಪದಡಿ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದು, ಈ ಕುರಿತಾಗಿ ಕಾನೂನು ತಜ್ಞರ ಅಭಿಪ್ರಾಯ ಕೇಳಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ, ಮನೆಯಲ್ಲಿ 8.12 ಕೋಟಿ ರೂ. ಹಣ ಪತ್ತೆಯಾಗಿದ್ದು, ಅಕ್ರಮ ಆಸ್ತಿ ಸಂಪಾದನೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ. ಲಂಚ ಪ್ರಕರಣದಲ್ಲಿ ಶಾಸಕರ ವಿಚಾರಣೆಯ ನಂತರ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಎಫ್ಐಆರ್ ದಾಖಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.