Sunday, September 25, 2022
Google search engine
HomeUncategorizedಸಾಲದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2022-23) ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿದೆ. ಫಲಾಪೇಕ್ಷಿಗಳು ‘ಗ್ರಾಮಒನ್’ ಅಥವಾ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ನಿಗಮಗಳ ವೆಬ್‍ಸೈಟ್ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ https://adcl.karnataka.gov.in, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ https://www.kbdc.karnataka.gov.in, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ https://banjarathanda.kar.nic.in/ ನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೊಡಗು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments