Thursday, August 11, 2022
Google search engine
HomeUncategorizedಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯ ಹೊರತುಪಡಿಸಿ) ಸೇರಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಆಸಕ್ತರು https://suvidha.karnataka.gov.in ಜಾಲತಾಣದಲ್ಲಿ ಅಗಸ್ಟ್ 24 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ನಿಗಮದ ವೆಬ್‍ಸೈಟ್ https://dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments