Friday, October 7, 2022
Google search engine
HomeUncategorizedಸಿನಿಮಾದಲ್ಲಿ ನಾಯಕಿ ಪಾತ್ರ ಕೊಡಿಸುವುದಾಗಿ ‘ನಿರ್ಮಾಪಕ’ನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಬಲವಂತ

ಸಿನಿಮಾದಲ್ಲಿ ನಾಯಕಿ ಪಾತ್ರ ಕೊಡಿಸುವುದಾಗಿ ‘ನಿರ್ಮಾಪಕ’ನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಬಲವಂತ

ಸಿನಿಮಾದಲ್ಲಿ ನಾಯಕಿ ಪಾತ್ರ ಕೊಡಿಸುವುದಾಗಿ ‘ನಿರ್ಮಾಪಕ’ನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಬಲವಂತ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಬಾಲಕಿ ಮೇಲೆ ನಿರ್ಮಾಪಕ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ಆಕೆಗೆ ಚಲನಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನೀಡುವುದಾಗಿ ಭರವಸೆ ನೀಡಿ ಕೃತ್ಯವೆಸಗಿದ್ದಾನೆ.

ಪೊಲ್ಲಾಚಿಯ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈಗ 20 ವರ್ಷದ ಸಂತ್ರಸ್ತೆ 2019ರಲ್ಲಿ ಅಪ್ರಾಪ್ತಳಾಗಿದ್ದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಕರೂರ್ ಜಿಲ್ಲೆಯ ನಲ್ಲಿಯಂಪಳಯಂ ಮೂಲದ ಪಾರ್ತಿಬನ್ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ತಮಿಳುನಾಡು ರಾಜಧಾನಿ ಚೆನ್ನೈ ಮೂಲದ ಸಂತ್ರಸ್ತೆ ಅತ್ಯಾಚಾರದ ಬಗ್ಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಲನಚಿತ್ರದಲ್ಲಿ ಪ್ರಮುಖ ಪಾತ್ರಕ್ಕಾಗಿ ನಟಿಯ ಅವಶ್ಯಕತೆಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಜಾಹೀರಾತು ಗಮನಿಸಿ ಅದರಲ್ಲಿ ನೀಡಿದ ಸಂಖ್ಯೆಗೆ ಕರೆ ಮಾಡಿದಾಗ, ಪೊಲ್ಲಾಚಿಯ ಲಾಡ್ಜ್‌ ಗೆ ಭೇಟಿ ನೀಡುವಂತೆ ತಿಳಿಸಲಾಗಿತ್ತು. ಅಲ್ಲಿಗೆ ಹೋದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಯು ಆಗಾಗ್ಗೆ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ. ಆದರೆ, ಎಂದಿಗೂ ಸಿನಿಮಾದಲ್ಲಿ ಪಾತ್ರ ನೀಡಲಿಲ್ಲ. ಒಮ್ಮೆ ಗರ್ಭಿಣಿಯಾಗಿದ್ದು, ಆರೋಪಿ ಗರ್ಭಪಾತ ಮಾಡುವಂತೆ ಒತ್ತಾಯಿಸಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ. ನಂತರ ಆಕೆಯಿಂದ ದೂರವಾಗಲು ಪ್ರಯತ್ನಿಸಿದ್ದ ಎಂದು ಹೇಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments