Thursday, August 11, 2022
Google search engine
HomeUncategorizedಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ತನ್ನ ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಕೆಯ ಸಾವಿನ ಹಿಂದಿನ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೀದರ್ ಮೂಲದ 21 ವರ್ಷದ ಶಿವಾನಿ ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಜೆಎಸ್ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್ ನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬುಧವಾರದಂದು ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತಿದ್ದು ಶಿವಾನಿ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಸಹಪಾಠಿಗಳು ಆಕೆಗೆ ಕರೆ ಮಾಡಿದ್ದು, ಮೊಬೈಲ್ ಸ್ವೀಕರಿಸದ ಕಾರಣ ಹಾಸ್ಟೆಲ್ ವಾರ್ಡನ್ ಕಾವ್ಯ ಅವರಿಗೆ ಮಾಹಿತಿ ನೀಡಿದ್ದರು. ರೂಮಿಗೆ ಬಂದ ಕಾವ್ಯ ಬಾಗಿಲು ತಟ್ಟಿದರೂ ಸಹ ತೆಗೆಯದಿದ್ದರಿಂದ ಸಹಾಯಕ ನಂದೀಶ್ ಗೆ ಕರೆದಿದ್ದು, ಸ್ಟೂಲ್ ಹಾಕಿಕೊಂಡು ಕಿಟಕಿಯಿಂದ ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡುಬಂದಿತ್ತು.

ಕೂಡಲೇ ಕಾಲೇಜು ಪ್ರಾಂಶುಪಾಲರಿಗೆ ವಿಷಯ ತಿಳಿಸಿದ್ದು ಬಳಿಕ ಪೋಲೀಸರಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಬಾಗಿಲು ಒಡೆದು ಶಿವಾನಿ ಶವವನ್ನು ಕೆಳಗಿಳಿಸಲಾಗಿದೆ. ಶಿವಾನಿ ಪೋಷಕರಿಗೆ ವಿಷಯ ಮುಟ್ಟಿಸಲಾಗಿದ್ದು, ಇಂದು ಶವ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments