Friday, December 9, 2022
Google search engine
HomeUncategorized15,000 ಪದವೀಧರ ಶಿಕ್ಷಕರ ನೇಮಕಾತಿ: ಸಚಿವರಿಂದ ಗುಡ್ ನ್ಯೂಸ್; 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ...

15,000 ಪದವೀಧರ ಶಿಕ್ಷಕರ ನೇಮಕಾತಿ: ಸಚಿವರಿಂದ ಗುಡ್ ನ್ಯೂಸ್; 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

15,000 ಪದವೀಧರ ಶಿಕ್ಷಕರ ನೇಮಕಾತಿ: ಸಚಿವರಿಂದ ಗುಡ್ ನ್ಯೂಸ್; 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಈ ವಾರದಲ್ಲಿ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಆರರಿಂದ ಎಂಟನೇ ತರಗತಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಗತಿಯಲ್ಲಿದ್ದು, ಅಂತಿಮ ಹಂತ ತಲುಪುತ್ತಿದೆ. ಈ ಹಿಂದೆ 1:2 ಅನುಪಾತದಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಿ ದಾಖಲಾತಿ ಪರಿಶೀಲನೆ ಮಾಡಲಾಗಿತ್ತು. ನಂತರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು 1:1 ಅನುಪಾತದಲ್ಲಿ ಸಿದ್ದಪಡಿಸಲಾಗಿದ್ದು, ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

ಈ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments