Thursday, August 11, 2022
Google search engine
HomeUncategorizedBIG BREAKING: ಅಗತ್ಯ ಬಿದ್ದರೆ ರಾಜ್ಯದಲ್ಲೂ ಯುಪಿ ಮಾಡೆಲ್;‌ ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

BIG BREAKING: ಅಗತ್ಯ ಬಿದ್ದರೆ ರಾಜ್ಯದಲ್ಲೂ ಯುಪಿ ಮಾಡೆಲ್;‌ ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

BIG BREAKING: ಅಗತ್ಯ ಬಿದ್ದರೆ ರಾಜ್ಯದಲ್ಲೂ ಯುಪಿ ಮಾಡೆಲ್;‌ ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಮೇಲಿನಬೆಟ್ಟದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಬಳಿಕ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಿಡಿ ಕಾರಿದ್ದರು.

ಅಲ್ಲದೇ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರ ಇಂತಹ ಕೃತ್ಯಗಳಲ್ಲಿ ಪಾಲ್ಗೊಂಡವರ ಮನೆ ಮೇಲೆ ಬುಲ್ಡೋಜರ್‌ ಹತ್ತಿಸಿ ಧ್ವಂಸ ಮಾಡುತ್ತಿದ್ದು, ಇದರಿಂದಾಗಿ ಅಲ್ಲಿ ಕ್ರಿಮಿನಲ್‌ ಪ್ರಕರಣಗಳು ಕಡಿಮೆಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಇಂತಹುದೇ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದರು.

ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಈ ಕುರಿತು ಪರೋಕ್ಷ ಸುಳಿವು ನೀಡಿದ್ದು, ಹತ್ಯೆಯಂತಹ ಕ್ರಿಮಿನಲ್‌ ಕೃತ್ಯಗಳಲ್ಲಿ ಪಾಲ್ಗೊಂಡವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಮುಂದೆ ಎಲ್ಲ ಆಯ್ಕೆಗಳಿದ್ದು, ಅಗತ್ಯ ಬಿದ್ದರೆ ಯುಪಿ ಮಾಡೆಲ್‌ ಜಾರಿಗೊಳಿಸಲೂ ಹಿಂದೇಟು ಹಾಕುವುದಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments