Thursday, August 11, 2022
Google search engine
HomeUncategorizedBIG BREAKING: ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ಇನ್ನಷ್ಟು ಹತ್ತಿರ: 2 ನೇ ಸುತ್ತಿನಲ್ಲೂ...

BIG BREAKING: ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ಇನ್ನಷ್ಟು ಹತ್ತಿರ: 2 ನೇ ಸುತ್ತಿನಲ್ಲೂ ಅಗ್ರಸ್ಥಾನ

BIG BREAKING: ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ಇನ್ನಷ್ಟು ಹತ್ತಿರ: 2 ನೇ ಸುತ್ತಿನಲ್ಲೂ ಅಗ್ರಸ್ಥಾನ

ಲಂಡನ್: ಬ್ರಿಟನ್ ನೂತನ ಪ್ರಧಾನಿ ಆಯ್ಕೆಗಾಗಿ ನಡೆದ ಮತದಾನದಲ್ಲಿ ಎರಡನೇ ಸುತ್ತಿನಲ್ಲಿಯೂ ರಿಷಿ ಸುನಕ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನಿನ್ನೆ 1 ನೇ ಸುತ್ತಿನಲ್ಲಿ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಇಂದು ಎರಡನೇ ಸುತ್ತಿನಲ್ಲಿಯೂ ರಿಷಿ ಸುನಕ್ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದಾರೆ. ಅಭ್ಯರ್ಥಿಗಳ ಪೈಕಿ ಒಬ್ಬರು ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ.

ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯರಾಗಿರುವ ರಿಷಿ ಸುನಕ್ ಪ್ರಧಾನಿ ಹುದ್ದೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಬೋರಿಸ್ ಜಾನ್ಸನ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮಹತ್ವದ ಹಣಕಾಸು ಖಾತೆ ನಿರ್ವಹಿಸಿದ್ದರು. ಆಡಳಿತ ವೈಫಲ್ಯ ವಿರೋಧಿಸಿ ರಾಜೀನಾಮೆ ನೀಡಿದ್ದರು. ಪ್ರಧಾನಿ ಹುದ್ದೆಗೆ ನಡೆಯುತ್ತಿರುವ ಪೈಪೋಟಿಯಲ್ಲಿ ರಿಷಿ ಸುನಕ್ ಹತ್ತಿರವಾಗಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ. ಯುಕೆ ನಾಯಕತ್ವ ಸ್ಪರ್ಧೆಯಲ್ಲಿ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಪ್ರಧಾನಿಯಾಗಿ ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಲು ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಹೆಚ್ಚು ಮತಗಳನ್ನು ಗಳಿಸಿದ್ದು, ಸ್ಪರ್ಧೆಯಿಂದ ಒಬ್ಬ ಅಭ್ಯರ್ಥಿ ಹೊರಬಿದ್ದಿದ್ದಾರೆ.

ಸುನಕ್ 101 ಮತಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಮೊರ್ಡಾಂಟ್ 83 ಮತ, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 64 ಮತಗಳನ್ನು ಪಡೆದರು. ಅಟಾರ್ನಿ ಜನರಲ್ ಸುಯೆಲ್ಲಾ ಬ್ರಾವರ್‌ಮನ್ 27 ಮತಗಳೊಂದಿಗೆ ಹೊರಹಾಕಲ್ಪಟ್ಟರು. ಶಾಸಕ ಟಾಮ್ ತುಗೆಂಧತ್ 32 ಮತಗಳನ್ನು ಪಡೆದರೆ, ಕೆಮಿ ಬಡೆನೋಚ್ 49 ಮತಗಳನ್ನು ಪಡೆದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments