Saturday, September 24, 2022
Google search engine
HomeUncategorizedBIG BREAKING: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಮುರುಘಾ ಶ್ರೀಗಳು ಅರೆಸ್ಟ್

BIG BREAKING: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಮುರುಘಾ ಶ್ರೀಗಳು ಅರೆಸ್ಟ್

BIG BREAKING: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಮುರುಘಾ ಶ್ರೀಗಳು ಅರೆಸ್ಟ್

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆಯಷ್ಟೇ ʼಸಂಧಾನಕ್ಕೂ ಸಿದ್ದ ಸಮರಕ್ಕೂ ಬದ್ದʼ ಎಂದು ಹೇಳಿದ್ದ ಶ್ರೀಗಳು ಬಳಿಕ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ ಚಿತ್ರದುರ್ಗದಿಂದ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀಗಳು ತಾವು ಬಳಸುತ್ತಿದ್ದ ಕಾರನ್ನು ಬಿಟ್ಟು ಮತ್ತೊಂದು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಕಾವಿಯನ್ನೂ ಧರಿಸಿರಲಿಲ್ಲವೆಂದು ಹೇಳಲಾಗಿದೆ.

ಆದರೆ ಪ್ರಕರಣ ದಾಖಲಾದ ಬಳಿಕ ಅವರ ಚಲನವಲನವನ್ನು ನಿರಂತರವಾಗಿ ಗಮನಿಸುತ್ತಿದ್ದ ಪೊಲೀಸರು ಮೊಬೈಲ್‌ ನ್ನು ಸಹ ಕಣ್ಗಾವಲಿನಲ್ಲಿರಿಸಿದ್ದರು. ಕಳೆದ ರಾತ್ರಿ ಅವರ ಫೋನ್‌ ಸ್ವಿಚ್ಚಾಫ್‌ ಆದ ಹಿನ್ನಲೆಯಲ್ಲಿ ಅವರ ನಡೆಯನ್ನು ಮತ್ತಷ್ಟು ತೀವ್ರವಾಗಿ ಗಮನಿಸುತ್ತಿದ್ದರು ಎನ್ನಲಾಗಿದೆ.

ಇಂದು ಬೆಳಿಗ್ಗೆ ಮತ್ತೊಂದು ಕಾರಿನಲ್ಲಿ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕ್ರಿಯೆ ಬಳಿಕ ಅವರನ್ನು ಔಪಚಾರಿಕವಾಗಿ ಬಂಧಿಸಲಾಗುತ್ತದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments