Saturday, November 26, 2022
Google search engine
HomeUncategorizedBIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.

ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಕಾರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ಕಡದಕಟ್ಟೆಯಲ್ಲಿ ತುಂಗಾ ಮುಖ್ಯ ಕಾಲುವೆಯಲ್ಲಿ ಪತ್ತೆಯಾಗಿದೆ. ಕ್ರೇನ್ ಮೂಲಕ ಕಾರನ್ನು ಮೇಲಕೆತ್ತಲಾಗಿದ್ದು, ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.

ಅ.30ರಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್ ಪತ್ತೆಗಾಗಿ ದಾವಣಗೆರೆ ಜಿಲ್ಲೆ ಎಸ್ ಪಿ ರಿಷ್ಯಂತ್ ನೇತೃತದಲ್ಲಿ ಪೊಲೀಸರು 4 ತಂಡ ರಚಿಸಿ ಹುಡುಕಾಟ ನಡೆಸಿದ್ದರು. ಆದರೆ ಇದೀಗ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments