BIG NEWS: ಅಮಾಯಕರನ್ನು ಬಂಧಿಸಿದರೆ 5 ಲಕ್ಷ ರೂ. ಪರಿಹಾರ; ಪೊಲೀಸ್ ಅಧಿಕಾರಿಯೇ ಕೊಡಬೇಕು; ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಅದಕ್ಕೆ ಪೊಲೀಸರೇ ಜವಾಬ್ದಾರರಾಗಿದ್ದು, ವ್ಯಕ್ತಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನಿಂಗರಾಜು ಎನ್ ಎಂಬ ಅಮಾಯಕರೊಬ್ಬರನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಇಂತದ್ದೊಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಓರ್ವ ವ್ಯಕ್ತಿ ಮೇಲೆ ಯಾವುದೇ ರೀತಿಯ ಆಪಾದನೆ ವಾರಂಟ್ ಹೊರಡಿಸಿದಾಗ ಜಾಮೀನು ಅಥವಾ ಜಾಮೀನು ರಹಿತವಾಗಿದ್ದರೂ ಬಂಧಿತ ವ್ಯಕ್ತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದ್ದು ಪೊಲೀಸರ ಜವಾಬ್ದಾರಿ. ಪ್ರಸ್ತುತ ಪ್ರಕರಣದಲ್ಲಿ ಗೊಂದಲ ಆಗಿರುವ ಹಿನ್ನೆಲೆಯಲ್ಲಿ ಅಕ್ರಮ ಬಂಧನಕ್ಕಾಗಿ 5 ಲಕ್ಷ ರೂಪಾಯಿ ಪರಿಹಾರವನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ ನೀಡುವಂತೆ ಸೂಚನೆ ನೀಡಿದೆ.