BIG NEWS: ಅರಕಲಗೂಡು JDS ಅಭ್ಯರ್ಥಿಯಾಗಿ ಎ.ಮಂಜು ಕಣಕ್ಕೆ
ಹಾಸನ: ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, ಎಲ್ಲರೂ ಸೇರಿ ಎ.ಮಂಜು ಅವರ ಹೆಸರನ್ನು ಸೂಚಿಸಿದ್ದಾರೆ. ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿಯವರೂ ಏನು ಹೇಳಿದ್ದಾರೆ ಅದಕ್ಕೆ ಸಮ್ಮತಿ ಇದೆ. ಕಾರ್ಯಕರ್ತರು ಕೂಡ ಮಂಜು ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಹಾಗಾಗಿ ಎ.ಮಂಜು ಅವರಿಗೆ ಅರಕಲಗೂಡಿನಿಂದ ಟಿಕೆಟ್ ನೀಡಲಾಗುವುದು ಎಂದರು.
ಕೆಲವರು ಕೇಸ್ ಗಾಗಿ ಎ.ಮಂಜು ಜೊತೆ ರಾಜಿ ಎಂದು ಹೇಳುತ್ತಿದ್ದಾರೆ. ಆದರೆ ಕೇಸ್ ಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.