Tuesday, September 27, 2022
Google search engine
HomeUncategorizedBIG NEWS: ಉಮೇಶ್ ಕತ್ತಿ ಅಗಲಿಕೆ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಬಹುದೊಡ್ಡ ಹೊಡೆತ; ಕಂಬನಿ...

BIG NEWS: ಉಮೇಶ್ ಕತ್ತಿ ಅಗಲಿಕೆ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಬಹುದೊಡ್ಡ ಹೊಡೆತ; ಕಂಬನಿ ಮಿಡಿದ BSY

BIG NEWS: ಉಮೇಶ್ ಕತ್ತಿ ಅಗಲಿಕೆ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಬಹುದೊಡ್ಡ ಹೊಡೆತ; ಕಂಬನಿ ಮಿಡಿದ BSY

ಕರ್ನಾಟಕ ಸಿಎಂ ಬಿಎಸ್ ವೈ ಗೆ ಬಿಗ್ ರಿಲೀಫ್; ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ 'ಸುಪ್ರೀಂ' ತಡೆ- Kannada Prabha

ಬೆಂಗಳೂರು: ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ಮೃತಪಟ್ಟಿರುವುದು ಆಘಾತ ತಂದಿದೆ. ಉಮೇಶ್ ಕತ್ತಿ ಓರ್ವ ಪ್ರಾಮಾಣಿಕ ವ್ಯಕ್ತಿ. 9 ಬಾರಿ ಶಾಸಕರಾಗಿ, ನಾಲ್ಕು ಬಾರಿ ಸಚಿವರಾಗಿದ್ದವರು. ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಉಮೇಶ್ ಕತ್ತಿ ನನ್ನ ಸಂಪುಟದಲ್ಲಿಯೂ ಸಚಿವರಾಗಿದ್ದವರು. ಬೆಳಗಾವಿ, ಉತ್ತರ ಕರ್ನಾಟಕ ಭಾಗದ ಪ್ರಭಾವಿ ವ್ಯಕ್ತಿ. ಅವರ ಅಗಲಿಕೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ದೊಡ್ಡ ಹೊಡೆತ ಬಿದ್ದಿದೆ ಎಂದರು.

ಉಮೇಶ್ ಕತ್ತಿ ಅವರ ಹಠಾತ್ ನಿಧನ ತೀವ್ರ ದುಃ ಖ ತಂದಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನು ಅಗಲಿರುವುದು ರಾಜ್ಯಕ್ಕೆ ಬಹುದೊಡ್ಡ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಕುಟುಂಬದವರಿಗೆ ದಃಖ ಭರಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments